ಬೆಂಗಳೂರು ಉತ್ತರ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಘಟನೆ ಕುರಿತು
ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ
ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದಿರುವ ಹಿನ್ನೆಲೆಯಲ್ಲಿ, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು'ರಾಜ್ಯದ ಕಾರಾಗೃಹಗಳಲ್ಲಿನ ಆಡಳಿತ ಮತ್ತು ಭದ್ರತೆಯ' ಕುರಿತಂತೆ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಕಾರಾಗೃಹಗಳ ಪ್ರಧಾನ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಡಾ. ಜಿ. ಪರಮೇಶ್ವರ ಅವರು ಘಟನೆಯ ಕುರಿತು ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.