ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನವೆಂಬರ್ 11ರಂದು ಬುಧುವಾರ ಕಾರ್ತಿಕ ಶುದ್ಧ ಪೂರ್ಣಿಮಾ ಅಂಗವಾಗಿ ಸಂಜೆ ಆರು ಗಂಟೆಗೆ ತುಂಗಭದ್ರಾ ನದಿ ತೀರ ತುಂಗಾ ಆರತಿ ಪುಣ್ಯ ನದಿ ಆರತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಮಂತ್ರಾಲಯ ಶ್ರೀ ಮಠದ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆ ನೀಡಿದೆ. ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಈ ಒಂದು ತುಂಗಾರತಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದೆ.