ಧಾರವಾಡ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದ ಬಳಿಯ ಸರ್ಕಾರಿ ಶಾಲಾ ಆವರಣದಲ್ಲಿ ಹೆಚ್ಚುವರಿ ಆರು ಕೊಠಡಿಗಳ ನಿರ್ಮಾಣಕ್ಕೆ ವಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಸಿಎಂ ಇದ್ದ ಸಂದರ್ಭದಲ್ಲಿ ಈ ಆರು ಕೊಠಡಿಗಳ ನಿರ್ಮಾಣಕ್ಕೆ ಟೆಂಡರ್ ಆಗಿತ್ತು. ಆ ಕೆಲಸಕ್ಕೆ ಈಗ ಚಾಲನೆ ನೀಡಲಾಗಿದೆ.