ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿಯವರ ನೇತೃತ್ವದಲ್ಲಿ ಜ.03, 2026ರಂದು ನಡೆಯಲಿರುವ ಮಹರ್ಷಿ ಶ್ರೀ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮದ ಪ್ರಚಾರ ಕಾರ್ಯಕ್ಕೆ ರವಿವಾರ ಬೆಳಿಗ್ಗೆ 10ಗಂಟೆಗೆ ಚಾಲನೆ ನೀಡಲಾಯಿತು. ಬಳ್ಳಾರಿ ನಗರ-ಜಿಲ್ಲೆಯ ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಕರಪತ್ರವನ್ನು ಬಿಡುಗಡೆಗೊಳಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಬಳ್ಳಾರಿಯ ದೇವಿ ನಗರದ ಶ್ರೀ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಕರಪತ್ರಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಮನೆ ಮನೆಗೆ ತೆರಳಿ ಕರಪತ್ರ ಹಂಚಲಾಯಿತು. ಈ ಸಂದರ್ಭ ವಾಲ್ಮೀಕಿ ನಾಯಕರ ಸಮಾಜದ ಪರಶುರಾಮುಡ