ಮಳವಳ್ಳಿ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಪಟ್ಟಣದ ಸಿದ್ಧಾರ್ಥ ನಗರದ ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಆಚರಣೆ ಸಮಿತಿ ಶನಿವಾರ ಸಂಜೆ 8.30 ರ ಸಮಯ ದಲ್ಲಿ ಆಯೋಜಿದ್ದ ಕಾರ್ಯಕ್ರಮ ದಲ್ಲಿ ಅಲಂಕೃತ ಬೆಳ್ಳಿ ರಥದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಮೆರವಣಿಗೆ ಮಾಡಲಾಯಿತು. ಇಲ್ಲಿನ ತಾ ಪಂ ಕಚೇರಿ ಆವರಣದಿಂದ ಆರಂಭವಾದ ಮೆರವಣಿಗೆಯಲ್ಲಿ ಹಲವಾರು ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು, ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ನೌಕರರು ಪಾಲ್ಗೊಂಡು ಕೈಯಲ್ಲಿ ಮೇಣದ ಬತ್ತಿ ಹಿಡಿದು ಹೆಜ್ಜೆ ಹಾಕಿದರು.