ಕೇಂದ್ರ ಸಚಿವರು ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಲ್ಹಾದ್ ಜೋಶಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಇಂದು ಕುಂದಗೋಳ ಕ್ಷೇತ್ರದ ಶಿರೂರ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಹತ್ತಿರ "ಸಾಂಸ್ಕೃತಿಕ ಭವನ" ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು, ಗ್ರಾಮದ ಗುರುಹಿರಿಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.