ದಾಂಡೇಲಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಗಾಯತ್ರಿ ಸುತಾರ ಹಾಗೂ ಶಾಲಿನಿ ಸಿದ್ದಿ ಅವರು ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ, ರಾಜಸ್ಥಾನದ ಭರತಪುರದಲ್ಲಿ ನಡೆದ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯಗಳ ಖೇಲೋ ಇಂಡಿಯಾ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕವನ್ನು ಬಾಚಿಕೊಂಡಿದ್ದಾರೆ. ಗಾಯತ್ರಿ ಸುತಾರ (59 ಕೆ.ಜಿ) ಕುಸ್ತಿ ಸ್ಪರ್ಧೆಯಲ್ಲಿ ಬಂಗಾರದ ಪದಕ ಬಾಚಿಕೊಂಡರೆ, ಶಾಲಿನಿ ಸಿದ್ದಿ (57 ಕೆ.ಜಿ) ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ 4:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.