ಚಿತ್ರದುರ್ಗ:ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಕ್ಕ ಮಹಿಳಾ ಪಡೆ ವಾಹನಕ್ಕೆ ಇಂದು ಡಿಸಿ ಟಿ. ವೆಂಕಟೇಶ್ ಚಾಲನೆ ನೀಡಿದ್ರು. ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಕ ಪೊಲೀಸ್ ಪಡೆಗೆ ಗಸ್ತು ವಾಹನ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಈ ಪಡೆ ಜಾಗೃತಿ ಮೂಡಿಸಲಿದೆ. ಹಾಸ್ಟಲ್ ಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳವಾಗದಂತೆ ತಡೆ, ಪೋಕ್ಸೋ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಮಕ್ಕಳು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲಿದೆ.