ಕಾರವಾರ: ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ
ಕಾರವಾರ : ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ ಗುರುವಾರದವರೆಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಶಾಸಕ ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಸೂಚಿಸುವಂತೆ ಈಡಿಗೆ ನ್ಯಾಯಾಲಯ ಇದೇ ವೇಳೆ ನಿರ್ದೇಶಿಸಿದೆ ಎಂದು ಸೋಮವಾರ ಸಂಜೆ ಐದುವರೆ ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.