ಬೆಂಗಳೂರು ಉತ್ತರ: ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಮಂಥನ.
ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ. ಸಿದ್ದರಾಮಯ್ಯ ಜಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಕರೆಯಲಾಗಿತ್ತು. ಸಚಿವರಾದ ಶ್ರೀ. ಕೃಷ್ಣ ಭೈರೇಗೌಡ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜನಬ್ ನಸೀರ್ ಅಹ್ಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಭೆಯಲ್ಲಿ ಇಲಾಖೆಯ ಪ್ರಮುಖ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಲಾಯಿತು