ನಂಜನಗೂಡು: ಏ.13 ಮತ್ತು 14 ರಂದು ಮನೆ ಮನೆ ಮತದಾನ; ನಗರದ ತಾಲ್ಲೂಕು ಆಡಳಿತ ಭವನದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕಲ್ಪ ಶ್ರೀ ಮಾಹಿತಿ
ನಂಜನಗೂಡು: ಏ.13 ಮತ್ತು 14 ರಂದು ಮನೆಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ ಎಂದು ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕಲ್ಪ ಶ್ರೀ ಹೇಳಿದರು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕಲ್ಪ ಶ್ರೀ ಮಾತನಾಡಿದರು. 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಎಲ್ಲರೂ ಮನೆಯಲ್ಲಿಯೇ ಇದ್ದು ತಮ್ಮ ಹಕ್ಕನ್ನು ಚಲಾಯಿಸಬೇಕು. ತಾಲ್ಲೂಕಿನಲ್ಲಿ ಒಟ್ಟು 11 ತಂಡಗಳನ್ನು ರಚನೆ ಮಾಡಲಾಗಿದೆ. ಚುನಾವಣಾ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.