ಮಳವಳ್ಳಿ : ಕನ್ನಡ ಸಾಹಿತ್ಯ ಪರಿಷತ್ ನ ತಾಲ್ಲೂಕು ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಕನ್ನಡ ಭವನದ ಆವರಣದಲ್ಲಿ ಏರ್ಪಡಿಸ ಲಾಗಿತ್ತು. ಶನಿವಾರ ಸಾಯಂಕಾಲ 6.30 ರ ಸಮಯದಲ್ಲಿ ಏರ್ಪಾಡಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪರಿಷತ್ ನ ಪದಾಧಿಕಾರಿಗಳು ಹಾಗೂ ಮುಖಂಡರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪುರಸಭೆ ಮಾಧ್ಯಕ್ಷ ದೊಡ್ಡಯ ಮಾತನಾಡಿ ಭಕ್ತ ಕನಕದಾಸರ ಅವರ ತತ್ವ ಆದರ್ಶಗಳನ್ನು ಪ್ರತಿ ಯೊಬ್ಬರು ಮೈಗೂಡಿಸಿಕೊಳ್ಳ ಬೇಕು. ಜೊತೆಗೆ ಕನಕದಾಸರ ಕೀರ್ತನೆಗಳನ್ನು ಪ್ರತಿಯೊಬ್ಬರು ಓದಿ ಅರ್ಥೈಸಿಕೊಳ್ಳಬೇಕೆಂದು ಕರೆ ನೀಡಿದರು.