ಬೆಂಗಳೂರು ದಕ್ಷಿಣ: ಬೊಮ್ಮನಹಳ್ಳಿಯಲ್ಲಿ ನೂತನ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಆರ್ ಎಂ ಆರ್ ಉದ್ಯಾನವನದಲ್ಲಿ ನೂತನವಾಗಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಹಲಗೂ ವರ್ಷಗಳಿಂದ ಉದ್ಯಾನವನದಲ್ಲಿ ಬ್ಯಾಡ್ಮಿಂಟನ್ ಕ್ರೀಡಾಂಗಣ ನಿರ್ಮಾಣ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದ್ದಾರೆ.