ಯಲ್ಲಾಪುರ: ಹತ್ಯೆಯಾದ ರಂಜೀತಾ ನಿವಾಸಕ್ಕೆ ಪ ಪಂ ಕಲ್ಯಾಣ್ ಸಮಿತಿ ರಾಜ್ಯಾಧ್ಯಕ್ಷ ಎ ಆರ್ ಕೃಷ್ಣ ಮೂರ್ತಿ ಭೇಟಿ
ಯಲ್ಲಾಪುರ : ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಯುವತಿ ರಂಜಿತಾ ಮನೆಗೆ ರಾಜ್ಯ ಸರ್ಕಾರದ ವಿಧಾನ ಮಂಡಲದ ಅನುಸೂಚಿತ ಜಾತಿ ಹಾಗೂ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹಾಗೂ ಸದಸ್ಯರು ಭೇಟಿ ನೀಡಿ ಸಂತ್ವನ ಸೂಚಿಸಿದರು. ಇದೇ ಸಂದರ್ಭದಲ್ಲಿ ರಂಜಿತಾ ಮನೆಯವರು ಮನವಿ ನೀಡಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಂತೆ ಕೋರಿದರು. ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಈ ಘಟನೆ ದುರದೃಷ್ಟಕರವಾಗಿದ್ದು, ಸರ್ಕಾರದ ವತಿಯಿಂದ ಸಾಧ್ಯವಾಗುವ ಎಲ್ಲಾ ಸೌಲಭ್ಯಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಹಾಗೆಯೇ ಆಕೆಯ ಮಗನ ವಿದ್ಯಾಭ್ಯಾಸಕ್ಕಾಗಿ ಮುರಾರ್ಜಿ ವಸತಿ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ನೇರವಾಗಿ ದಾಖಲಾತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.