ಸಿದ್ಧಾಪುರ: ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಭೀಮಣ್ಣ ನಾಯ್ಕ
ಸಿದ್ದಾಪುರ : ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾರ್ಯವನ್ನು ಶಾಸಕರಾದ ಭೀಮಣ್ಣ ನಾಯ್ಕ ಅವರು ಪರಿಶೀಲನೆಯನ್ನು ನಡೆಸಿದರು. ಇಂದು ಶುಕ್ರವಾರ ಸಂಜೆ 4:30 ಗಂಟೆ ಸುಮಾರಿಗೆ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ, ಬಾಕಿ ಉಳಿದಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯವರಿಗೆ ಸೂಚನೆಯನ್ನು ನೀಡಿದರು.