ತಡರಾತ್ರಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದ ಬಳಿ, ಮಾಜಿ ಸಚಿವ ಹೆಚ್. ಎಂ. ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಒಡೆತನದ ಕಾರು ಕೆಎ 51 ಎಂಕ್ಯೂ 0555 ನಂಬರ್ ನ ಕಾರು, ಕೆಲಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ರಾಜೇಶ್ ಎಂಬ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ರಾಜೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.