ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಉತ್ತಮ ಮಳೆ, ಗಾಜನೂರಿನ ತುಂಗಾ ಜಲಾಶಯದ ಒಳಹರಿವು ಹೆಚ್ಚಳ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದ ಒಳಹರಿವು ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳಹರಿವಿನಷ್ಟೇ ಪ್ರಮಾಣದ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 25,166 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳಗೆ ಹರಿಸಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಭಾನುವಾರ ತಿಳಿದು ಬಂದಿದೆ. ಇದರಿಂದ ತುಂಗಾ ನದಿ ಪುನಃ ಮೈದುಂಬಿ ಹರಿಯುತ್ತಿದೆ