ಶಿವಮೊಗ್ಗ: ಸೆ.22 ರಿಂದ ಮತಗಳ್ಳತನ್ನ ಕುರಿತು ಅಭಿಯಾನ: ನಗರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್
ಮತಗಳ್ಳತನದ ವಿರುದ್ಧ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಅಭಿಯಾನ ಆರಂಭಿಸಿದ್ದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಕೆಪಿಸಿಸಿ ನಿರ್ದೇಶನದಂತೆ ಸೆ. 22ರಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಿ ಸಂಗ್ರಹಿಸುವ ಮೂಲಕ ಅಭಿಯಾನ ಕೈಗೊಳ್ಳಲಾಗಿದೆ.ಈ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಂದು ಚಾಲನೆ ನೀಡಲಿದ್ದಾರೆ ಎಂದು ಶಿವಮೊಗ್ಗ ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್ ತಿಳಿಸಿದರು.