ಶಿರಸಿ: ರಾಜ್ಯಮಟ್ಟದ ಆರೋಗ್ಯ ಜ್ಯೋತಿ ಪ್ರಶಸ್ತಿಗೆ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ ಆಯ್ಕೆ
ಶಿರಸಿ : ಬೆಂಗಳೂರಿನ ರಾಘವೀ ಚಾರಿಟೇಬಲ್ ಟ್ರಸ್ಟ್ ನೀಡುವ "ಆರೋಗ್ಯ ಜ್ಯೋತಿ-2025" ರಾಜ್ಯ ಪ್ರಶಸ್ತಿಗೆ ತಾಲೂಕಿನ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ ಅವರು ಭಾಜನರಾಗಿದ್ದಾರೆ. ಈ ಬಗ್ಗೆ ಬುಧವಾರ ಸಂಜೆ 5:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ ಅವರ ಅನುಪಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಆರೋಗ್ಯ ಜ್ಯೋತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ.23ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.