ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋಗಳು ಸೋಮವಾರ ವೈರಲ್ ಆಗಿವೆ. ಮಹಿಳೆಯೊಬ್ಬರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋಗಳು ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿವೆ. ಸದ್ಯದ ಮಾಹಿತಿ ಪ್ರಕಾರ, ವಿಡಿಯೋದಲ್ಲಿರುವುದು ಒಂದು ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂದು ಹೇಳಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿಯೇ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ದೃಶ್ಯಗಳು ವೈರಲ್ ಆದ ವಿಡಿಯೋಗಳಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು ಐಪಿಎಸ್ ಅಧಿಕಾರಿ ಸರಸ ನಡೆಸಿರುವ ವಿಡಿಯೋಗಳಾಗಿವೆ ಇವು