ಶಿವಮೊಗ್ಗ: ಸಾಂಕ್ರಮಿಕ ರೋಗ ತಡೆಗೆ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಪಟ್ಟಣದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ ಸೂಚನೆ
ಎಲ್ಲೇಡೆ ಸಾಂಕ್ರಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ.ಸಂಗಮೇಶ್ವರ ಸೂಚನೆಯನ್ನು ನೀಡಲಾಯಿತು. ಭದ್ರಾವತಿಯ ನಗರ ಸಭೆಯ ಸರ್.ಎಂ.ವಿ ಸಭಾಂಗಣದಲ್ಲಿ ನಗರಸಭೆ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಗರಸಭೆಯ ಅಧಿಕಾರಿಗಳು ಈ ಕುರಿತಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.