ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಶ್ರೀ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಎನ್. ಸ್ವಾಮಿ ಚಲವಾದಿ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಶ್ರೀ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಶ್ರೀ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಸುನಿಲ್ ಕುಮಾರ್, ಸಂಸದರು, ಶಾಸಕರು, ರಾಜ್ಯ ಕಾರ್ಯಾಲಯದ ಕಾರ್ಯದರ್ಶಿ ಶ್ರೀ ಲೋಕೇಶ್ ಅಂಬೇಕಲ್ಲು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಮತ್