ಬೀದರ್: ಮಾರ್ಚ 12ರಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕದ ಪ್ರಥಮ ಲಿಂಗಾಯತ ದೀಕ್ಷೆ ಪಂಚಮಸಾಲಿ ಬೃಹತ್ ಸಮಾವೇಶ:ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮಿಜೀ
Bidar, Bidar | Mar 10, 2024 ಮಾರ್ಚ 12ರಂದು ಸರ್ಕಾರದ ನಿರ್ಲಕ್ಷ ಖಂಡಿಸಿ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಾಜ್ಯದ ಪ್ರಪ್ರಥಮ ಲಿಂಗಾಯತ ದೀಕ್ಷ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮಿಜೀ ಹೇಳಿದರು. ಕಲಬುರಗಿಯ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಒಳಗೆ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದಲ್ಲಿ ಒಬಿಸಿ ಹಾಗೂ ದೀಕ್ಷ, ಪಂಚಮಸಾಲಿ, ಮಲೆಗೌಡ, ಲಿಂಗಾಯತರುಗಳಿಗೆ 2ಎ ಮೀಸಲಾತಿ ಕಲ್ಪಿಸಲು ಎರಡನೆ ಹೋರಾಟಕ್ಕೆ ಚಾಲನೆ ಸಿಗಲಿದೆ. ಸಮಾಜದ ಬಾಂಧವರು ಲಕ್ಷಾಂತರ ಸಂಖ್ಯೆಯಲ್ಲಿ ಭಾಗಿಯಾಗಲು ಲಿಂಗಾಯತ ದೀಕ್ಷೆ ಪಂಚಮಸಾಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಜೀ ಹೇಳಿದರು. ಜಾತಿ ಗಣತಿ ಮಾಡಲು ವಿರೋಧವಿಲ್ಲ ಆದ್ರೆ ಎಲ್ಲರ ಮನೆಗೆ ಭೇಟಿ ನೀಡಿ ಪ್ರಾಮಾಣಿಕವಾಗಿ ವರದಿ ಮಾಡಲಿ ಎಂದರು.