ಬೈಲಹೊಂಗಲ: ಬೆಳಗಾವಿಯ ಬೈಲಹೊಂಗಲದಲ್ಲಿ ಪತ್ನಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿಯ ಬಂಧನ
ಬೈಲಹೊಂಗಲದ ಇಂದಿರಾ ನಗರದಲ್ಲಿ ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಪ್ರಕರಣದಲ್ಲಿ ಆರೋಪಿ ರಾಜು ಮಾಡಮಗೇರಿಯನ್ನು 48 ಗಂಟೆಗಳ ಒಳಗಾಗಿ ಪೊಲೀಸರು ಬಂಧಿಸಿದ್ದಾರೆ.