ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಕೋಲಾರದ ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದಿವ್ಯ.ಪಿ.ಕೆ. ರವರು ಮಂಗಳವಾರ ಬೆಳ್ಳಿಗೆ 10 ಗಂಟೆಯಲ್ಲಿ ಗೌರವ ಅರ್ಪಿಸಿದರು. ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಆರ್.ರವಿಶಂಕರ್ ಹೆಚ್,ಸಿ. ಜಗಧೀಶ್, ಡಿ.ಎಸ್.ಪಿ. ಮಹ್ಮಮದ್ ನಾಗ್ಲೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.