ಕಲಬುರಗಿ ನಗರದ ಕೆಬಿಎನ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಅ.28 ರಂದು ಜಿಲ್ಲಾಡಳಿತ, ಚುನಾವಣಾ ಆಯೋಗ ಸೇರಿ ವಿವಿಧ ಸಂಸ್ಥೆಗಳ ವತಿಯಿಂದ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಇನ್ನೂ, ಅ.30 ಹಾಗೂ ನ.3 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಕೂಡ ಹಮ್ಮಿಕೊಳ್ಳಲಾಗಿದೆ.