ಶಿವಮೊಗ್ಗ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ಅಧಿವೇಶನದಲ್ಲಿ ಮಾತನಾಡಲು ನಗರದ ಶಾಸಕ ಚನ್ನಬಸಪ್ಪರಿಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಮುಂಬರುವ ಅಧಿವೇಶನದಲ್ಲಿ ಪಕ್ಷಾತೀತವಾಗಿ ಬೆಂಬಲಿಸುವಂತೆ ಆಗ್ರಹಿಸಿ ಶಿವಮೊಗ್ಗ ನಗರದ ಶಾಸಕರಿಗೆ ಮನವಿಯನ್ನ ಸಲ್ಲಿಸಿದ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ. ಬುದುವಾರ ಶಿವಮೊಗ್ಗ ನಗರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರ ಮನೆಗೆ ಭೇಟಿ ನೀಡಿದ ಸ್ವಾಮಿಗಳು ಹಾಗೂ ಪಂಚಮಸಾಲಿ ಸಮಾಜದ ಮುಖಂಡರು ಜುಲೈ 15 ರಿಂದ ನಡೆಯಲಿರುವ ರಾಜ್ಯ ಸರ್ಕಾರದ ಮುಂಗಾರು ಅಧಿವೇಶನದಲ್ಲಿ ಕಳೆದ ಮೂರು ವರ್ಷಗಳಿಂದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲಿಸುವಂತೆ ಮನವಿಯನ್ನ ಸಲ್ಲಿಸಿದರು.