ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದರು. ಮುಖ್ಯಮಂತ್ರಿಗಳ ಆರೋಗ್ಯ ಸರಿಯಿಲ್ಲ ಎಂಬ ವಿಷಯ ತಿಳಿದು ಅವರನ್ನು ಭೇಟಿಯಾಗಲು ಬಂದಿದ್ದೆ ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಹೇಳಿದರು ಬುಧವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆರೋಗ್ಯದಲ್ಲಿ ಏರು ಪೇರಾಗಿತ್ತು, ಆದರೆ ಈಗ ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಹೇಳಿದರು