ಮಾಗಡಿ: ಬೆಂಗಳೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ಮಾಗಡಿ ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ
ಬಾಕಿ ಬಿಲ್ ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಾಗಡಿ ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ರವೀಂದ್ರ ಎಸ್.ಜಿ. ಅವರನ್ನು ಬೆಂಗಳೂರು ದಕ್ಷಿಣ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಆರೋಪಿಯನ್ನು 5,000 ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.