ಅಪೇಕ್ಷ ಬ್ಯಾಂಕ್ ಗೆ ರಾಹುಲ್ ಜಾರಕಿಹೊಳಿ ನಿರ್ದೇಶಕ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಈ ಹಿಂದೆ ಲಕ್ಷ್ಮಣ ಸವದಿಯವರು 15 ವರ್ಷಗಳ ಕಾಲ ಹಾಗೂ ಬಳಿಕ ಲಕ್ಷ್ಮಣರಾವ್ ಚಿಂಗಳೆ ಅವರು ಅಪೇಕ್ಷ ಬ್ಯಾಂಕ್ ನಿರ್ದೇಶಕರಾಗಿದ್ದರು. ಈ ಬಾರಿ ರಾಹುಲ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು ಗುರುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಡಿಸಿಸಿ ಬ್ಯಾಂಕ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿ ರಾಹುಲ್ ಜಾರಕಿಹೊಳಿ ಅವರನ್ನು ಅಪೇಕ್ಷ ಬ್ಯಾಂಕ್ಗೆ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು