ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯಲ್ಲಿ ಹೇಲ್ಮೆಟ ಬಳಕೆಯ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಯಿತು. ಜೀವನ ತುಂಬಾ ಮುಖ್ಯ ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿಕೊಂಡ ಅನೇಕ ಪ್ರಕರಣಗಳ ಬಗ್ಗೆ ಜನತೆಗೆ ತಿಳಿವಳಿಕೆ ನೀಡಿ ಹೆಲ್ಮೇಟ ಧರಿಸಲು ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಸಿದ್ದೇವೆ. ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಸಿ ತಿಳಿವಳಿಕೆ ನೀಡುತ್ತಿದ್ದೇವೆ ಎಂದು ಸೋಮವಾರ 12 ಗಂಟೆಗೆ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪುಟ್ಟಮಾದಯ್ಯ ಸಭೆಗೆ ಮಾಹಿತಿ ನೀಡಿದರು.