ಹುಬ್ಬಳ್ಳಿ : ಮಕ್ಕಳ ಕಲಿಕೆಗೆ ಪಾಲಕರು, ಪೋಷಕರು ಪ್ರೋತ್ಸಾಹ ನೀಡಬೇಕಾಗುತ್ತದೆ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರ, ಪೋಷಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳನ್ನು ಶಿಕ್ಷಣದ ಮೂಲಕ ಸಮಾಜದಲ್ಲಿ ಮುಂದೆ ತರಬಹುದು. ಪಾಲಕರು ಜವಾಬ್ದಾರಿಯನ್ನು ಅರಿತು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ, ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಪಣ ತೊಡಬೇಕು. ಕಳೆದ ಆರು ತಿಂಗಳಿನಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಹಾಯ ಹಸ್ತವನ್ನು ನೀಡುತ್ತಿವೆ ಎಂದು ಅವರು ತಿಳಿಸಿದರು.