ಜನಸಾಮಾನ್ಯರ ಹಕ್ಕೊತ್ತಾಯಗಳಿಗಾಗಿ ಸಿಪಿಐಎಂ ನೇತೃತ್ವದಲ್ಲಿ ಡಿ.21 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಕೋಲಾರ: ಜನಸಾಮಾನ್ಯರ, ರೈತರ, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.21ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆಗಳು ಪಟ್ಟಿ ಸಲ್ಲಿಸಲಾಗುತ್ತದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ರಾಜ್ಯಾದ್ಯಂತ ಜನಾಂದೋಲದ ಮೂಲ