ಪಾಂಡವಪುರ: ಪಾಂಡವಪುರ ಪಟ್ಟಣದ ಪುರಸಭಾ ಸಭಾಂಗಣದಲ್ಲಿ ನಡೆದ ವಿಭಿನ್ನವಾಗಿ ನಡೆದ ಪೌರ ಕಾರ್ಮಿಕರ ದಿನಾಚರಣೆ
ಪಾಂಡವಪುರ : ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಪೌರಕಾರ್ಮಿಕರ ದಿನಾಚರಣೆ ಗುರುವಾರ ವಿಭಿನ್ನವಾಗಿ ಆಚರಿಸಲಾಯಿತು. ಸಾಯಂಕಾಲ 4.30 ರ ಸಮಯ ದಲ್ಲಿ ನಡೆದ ಸಮಾರಂಭದಲ್ಲಿ ಪುರಸಭೆಯ ಸಭಾಂಗಣಕ್ಕೆ "ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ" ಎಂದು ನಾಮಕರಣ ಮಾಡುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. ವಿಶೇಷ ಆಕರ್ಷಣೆಯಾಗಿ, ಪುರ ಸಭಾ ಆರೋಗ್ಯಾಧಿಕಾರಿ ಧನಲಕ್ಷ್ಮಿ ಅವರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಿ, ಪೌರಕಾರ್ಮಿಕರು, ಸದಸ್ಯರು ಹಾಗೂ ಅಧಿಕಾರಿಗಳು ಭಾವೈಕ್ಯತೆಯನ್ನು ಮೆರೆದರು.