ಮದ್ದೂರು: ಭಾರತೀನಗರದಲ್ಲಿ ಭಾರತಿ ಎಜುಕೇಶನ್ ಟ್ರಸ್ಟ್ ಆಯೋಜಿಸಿದ್ದ ಭಾರತೀ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ, ಶಾಸಕ ಪ್ರದೀಪ್ ಈಶ್ವರ್ ಭಾಗಿ
Maddur, Mandya | Sep 18, 2025 ಮದ್ದೂರು ತಾಲ್ಲೂಕು ಭಾರತೀನಗರದ ಭಾರತೀ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಭಾರತೀ ಉತ್ಸವ-2025 ರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪರಿಶ್ರಮ ನೀಟ್ ಅಕಾಡೆಮಿ ಸಂಸ್ಥಾಪಕ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪರಿಶ್ರಮ ನೀಟ್ ಅಕಾಡೆಮಿ ಸಂಸ್ಥಾಪಕ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರು ಮಾತನಾಡಿ, ಗ್ರಾಮೀಣ ಬಡ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗುವ ಜೊತೆಗೆ ಮಂಡ್ಯ ಕಾವೇರಿ ಹೋರಾಟಕ್ಕೆ ಚೈತನ್ಯ ತುಂಬಿರುವ ಹಿರಿಯ ಮುತ್ಸದ್ಧಿ ಜಿ.ಮಾದೇಗೌಡರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುವುದಾಗಿ ಹೇಳಿದರು. ನನ್ನ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲ