ಶಿವಮೊಗ್ಗ: ನ್ಯಾಯಾಲಯದ ಆದೇಶದಂತೆ ವಾಜಪೇಯಿ ಲೇಔಟ್ ನಿವೇಶನ ಹಂಚಿಕೆ ನಗರದಲ್ಲಿ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು 2009-2010 ನೇ ಸಾಲಿನಲ್ಲಿ ಶಿವಮೊಗ್ಗ ನಗರದ ಹೊರವಲಯದ ಮಲ್ಲಿಗೇನಹಳ್ಳಿ ಸಾರ್ವಜನಿಕ ವಿತರಣೆಗಾಗಿ ಸುಮಾರು 172 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆಯಲ್ಲಿ ಆಗಿರುವ ಸಮಸ್ಯೆ ಕುರಿತು ನ್ಯಾಯಾಲಯದ ಆದೇಶದ ಮೇರೆಗೆ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಶನಿವಾರ ಶಿವಮೊಗ್ಗ ನಗರದ ತುಡ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.