ಬೆಂಗಳೂರು ಉತ್ತರ: ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ ಅಂತಿಮ ದರ್ಶನ ಪಡೆದುಕೊಂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ತೆರಳಿದ್ದ ಚಾಮರಾಜಪೇಟೆ, ಚಿಕ್ಕಪೇಟೆ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಆರ್. ವಿ. ದೇವರಾಜ್ (68) ಅವರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನವನ್ನು ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿಯ ಮನೆಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಬುಧವಾರ ಕನಕಪುರದ ಸೋಮನಹಳ್ಳಿ ತೋಟದ ಮನೆಯ ಬಳಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಡಿಸೆಂಬರ್ 3ರಂದು ಅವರ 68ನೇ ಹುಟ್ಟುಹಬ್ಬದಂದೇ ಅಂತ್ಯಕ್ರಿಯೆ ನಡೆಯಲಿದೆ.