ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವದರ ಅಂಗವಾಗಿ ಅಂಕೋಲಾ ಮಂಡಲದ ವತಿಯಿಂದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಅಂಕೋಲಾ ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು. ಈ ವಿಜಯೋತ್ಸವದಲ್ಲಿ ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ ಅವರು ಶುಕ್ರವಾರ ಸಂಜೆ 5 ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಂಡಲದ ಮಾಜಿ ಅಧ್ಯಕ್ಷರಾದ ಸಂಜಯ ನಾಯ್ಕ, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಾಜೇಂದ್ರ ನಾಯ್ಕ, ಬಿಜೆಪಿಯ ಪ್ರಮುಖರಾದ ಜಗದೀಶ ಮೊಗಟಾ, ಭಾಸ್ಕರ ನಾರ್ವೇಕರ, ಚಂದ್ರಕಾಂತ ನಾಯ್ಕ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು