ಬೆಂಬಲ ಬೆಲೆ ಯೋಜನೆಯಡಿ ಗೋವಿನಜೋಳ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸೇನೆ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು. ಭಾನುವಾರ ಮದ್ಯಾಹ್ನ 3 ಗಂಟೆಗೆ ನವಲಗುಂದ ಪಟ್ಟಣದ ರೈತ ಹುತಾತ್ಮ ಸ್ಮಾರಕದ ಎದುರಿಗೆ ಕರ್ನಾಟಕ ರಾಜ್ಯ ರೈತ ಸೇನೆ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಸುಧೀರ ಸಾಹುಕಾರ ರೈತರ ಮನವಿ ಸ್ವೀಕರಿಸಿದರು.