ಸಿಂದಗಿ: ನಾಗಾವಿ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ನೂತನ ಪುತ್ತಳಿಯನ್ನು ಸೋಮವಾರ ಸಾಯಂಕಾಲ 5ಗಂಟೆ ಸುಮಾರಿಗೆ ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ನಾಗಾವಿ ಗ್ರಾಮದಲ್ಲಿ ಬಸವಣ್ಣನವರ ಮೂರ್ತಿ ನಿರ್ಮಾಣಕ್ಕಾಗಿ ಗ್ರಾಮಸ್ಥರ ಬಹು ದಿನಗಳ ಬೇಡಿಕೆಯಾಗಿತ್ತು ಇಂದು ಉದ್ಘಾಟನೆ ಮಾಡುತ್ತಿರುವುದು ಸಂತಸವಾಗಿದೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಬಸವ ಅಭಿಮಾನಿಗಳು ಗ್ರಾಮಸ್ಥರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.