ಬೀದರ್ ಜಿಲ್ಲೆಯಿಂದ ಐವರನ್ನು ಗಡಿಪಾರು ಮಾಡಲಾಗಿದೆ ಎಂದು ನಗರದಲ್ಲಿ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾಹಿತಿ ನೀಡಿದ್ದಾರೆ. ಘೋರ ಅಪರಾಧ ಕೃತ್ಯಗಳಲ್ಲಿ ಶಾಮಿಲಾಗಿದ್ದ ಐವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ಜರುಗಿಸಲಾಗಿದೆ. ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ಐವರ ಪೈಕಿ ಒಬ್ಬನ ವಿರುದ್ಧ ಶಾಂತಿ, ಸೌಹಾರ್ದತೆಗೆ ಧಕ್ಕೆ, ಕಳ್ಳತನ, ಮಾರಣಾಂತಿಕ ಹಲ್ಲೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ತಿಳಿಸಿದ್ದಾರೆ.