ಬಳ್ಳಾರಿ ಮಹಾನಗರ ಪಾಲಿಕೆಯ 2026-2027 ನೇ ಸಾಲಿನ ಆಯ-ವ್ಯಯ ಪತ್ರದ ತಯಾರಿಕೆಯ ಪೂರ್ವಭಾವಿ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನಗರದ ನಾಗರಿಕರು, ಸಂಪನ್ಮೂಲ ವ್ಯಕ್ತಿಗಳು, ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೋಂದಾಯಿತ ಸರ್ಕಾರೇತರ ಸಂಘ-ಸAಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ/ಸAಸ್ಥೆಗಳ ಪ್ರತಿನಿಧಿಗಳು ಆಗಮಿಸಿ ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಮುಂಗಡ ಆಯ-ವ್ಯಯ ತಯಾರಿಕೆಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು. ಸಭೆಯು ಸಾಮಾನ್ಯ ಸಾರ್ವಜನಿಕ ಕುಂದು ಕೊರತೆ ಸಭೆಯಾ