ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಅಂಬಿಗರ ಚೌಡಯ್ಯ ಜಯಂತಿಯನ್ನು ಕಾರವಾರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ 12ರ ಸುಮಾರು ಆಚರಿಸಲಾಯಿತು. ಕುಮಟಾದ ಹೊನ್ನಾಳಿ ಶಾಲೆಯ ಮುಖ್ಯಾಧ್ಯಾಪಕ ಎಸ್. ಕೆ ಅಂಬಿಗ ಅವರು ನಿಜಶರಣ ಅಂಬಿಗರ ಚೌಡಯ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ವಿಭಾಗದ ತಹಶೀಲ್ದಾರ ಪ್ರಮೋದ ನಾಯ್ಕ, ಸಮಾಜದ ಹಿರಿಯರಾದ ಬಾಬು ಅಂಬಿಗ ಇದ್ದರು