ಮಸ್ಕಿ: ಮಸ್ಕಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಿಯುಸಿ ಪ್ರಶ್ನಾಪತ್ರಿಕೆ ಮೌಲ್ಯ ಮಾಪನ ವೇಳೆ ನಿಧನ
Maski, Raichur | Mar 27, 2024 ಸರ್ಕಾರಿ ನೌಕರರ ಸಂಘದ ಮಸ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಕರಡಕಲ್(50) ಪಿಯುಸಿ ಪ್ರಶ್ನೆ ಪತ್ರಿಕೆ ಮೌಲ್ಯಮಾಪನದ ವೇಳೆ ತೀವ್ರ ಹೃದಯಾಘಾತಕ್ಕೀಡಾಗಿ ಬುಧವಾರ ನಿಧನರಾಗಿದ್ದಾರೆ. ಬಳ್ಳಾರಿಯ ಮೌಲ್ಯಮಾಪನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅವರು ಮಸ್ಕಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.