ಚಾಮರಾಜನಗರ ತಾಲೂಕಿನ ನಂಜೇದೇವನಪುರದ ಕುಮಾರಸ್ವಾಮಿ ಎಂಬವರ ಜಮೀನಿನಲ್ಲಿ 5 ಹುಲಿ ಓಡಾಟ ಪತ್ತೆ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದು 5 ದಿನ ಮೂರು ಗ್ರಾಮಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ಚಾಮರಾಜನಗರ ತಹಸಿಲ್ದಾರ್ ಗಿರಿಜಾ ಆದೇಶಿಸಿದ್ದಾರೆ. ನಂಜೆದೇವನಪುರ ಸೇರಿ ಉಡಿಗಾಲ, ವೀರನಪುರ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿ. 24 ರಿಂದ 28 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ ಕಾರ್ಯಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರೆಂದು ಕಟ್ಟೆಚ್ಚರ ವಹಿಸಲಾಗಿದ್ದು ಯಾರೂ ಗುಂಪು ಸೇರದಂತೆ ಹಾಗೂ ಒಬ್ಬರೇ ಓಡಾಡದಂತೆ, ಕಾರ್ಯಾಚರಣೆ ವೇಳೆ ಜನರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ.