ಬೆಂಗಳೂರು ಉತ್ತರ: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ 88,91,411 ಮತದಾರರು : ನಗರದಲ್ಲಿ ಆರ್. ರಾಮಚಂದ್ರನ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಬರಲಿದ್ದಾರೆ ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು* ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ