ಶಿರಸಿ: ಕನ್ನಡವನ್ನು ಯಾರೂ ಮರೆಯಬಾರದು: ರಂಗಧಾಮದಲ್ಲಿ ಶಾಸಕ ಭೀಮಣ್ಣ ನಾಯ್ಕ
ಶಿರಸಿ : ಕನ್ನಡವನ್ನು ಯಾರೂ ಮರೆಯಬಾರದು. ಕನ್ನಡ ನಾಡಿನ ರಕ್ಷಣೆ ಕೇವಲ ಸರ್ಕಾರದ ಕೆಲಸವಲ್ಲ. ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ನಗರದ ನೆಮ್ಮದಿ ರಂಗಧಾಮದಲ್ಲಿ ಸೋಮವಾರ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಕಸಾಪ ಶಿರಸಿ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪ್ರತಿಶತ 100% ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.