ಮಂಗಳೂರು: ದ.ಕ.ಲೋಕಸಭಾ ಕ್ಷೇತ್ರದ ವಿಶೇಷ ವೆಚ್ಚ ವೀಕ್ಷಕರಿಂದ ಪರಿಶೀಲನಾ ಸಭೆ; ನೀತಿ ಸಂಹಿತೆ ಪಾಲಿಸಲು ನಗರದಲ್ಲಿ ವೆಚ್ಚ ವೀಕ್ಷಕ ಮುರಳಿ ಕುಮಾರ್ ಸೂಚನೆ
ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳೀ ಕುಮಾರ್ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ಹಮ್ಮಿ ಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ವೆಚ್ಚವೀಕ್ಷಕ ಮೆರುಗು ಸುರೇಶ್, ಚುನಾವಣಾಧಿಕಾರಿಗಳೂ ಆಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ದ.ಕ.ಜಿಪಂ ಸಿಇಒ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಮತ್ತಿತರರು ಉಪಸ್ಥಿತರಿದ್ದರು.