ಪುಸ್ತಕಗಳನ್ನು ಓದುವ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ಅಭಿಯಾನ ಮಾಡಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ನಗರದಲ್ಲಿ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಸಂಜೆ 6 ಗಂಟೆಗೆ ನಡೆದ ಸಾಹಿತಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೊಬೈಲ್ ಬಂದಾಗಿನಿಂದ ಪುಸ್ತಕಗಳನ್ನು ಓದುವುದೇ ಕಡಿಮೆಯಾಗಿದೆ. ಪ್ರತಿಯೊಬ್ಬರ ಮನೆಯಲ್ಲಿಯೂ ಗ್ರಂಥಾಲಯ ಇರಬೇಕು. ಪುಸ್ತಕ ಓದುವ ಸಂಸ್ಕೃತಿ ಮುಂದುವರ