ಕಮಲನಗರ: ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವದ 70ನೇ ವರ್ಷಾಚರಣೆ
ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಬೆಳಿಗ್ಗೆ 11:30 ಕ್ಕೆ ಕನ್ನಡ ರಾಜ್ಯೋತ್ಸವದ 70ನೇ ವರ್ಷಾಚರಣೆಯನ್ನು ಅತ್ಯಂತ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. ತಹಸಿಲ್ದಾರ್ ಅಮಿತಕುಮಾರ್, ಕುಲಕರ್ಣಿ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ತಿಳಿಸಿದರು. ತಾ. ಪಂ ಇ. ಒ ಹಣಮಂತರಾವ್ ಕೌಟಗೆ ಮಾತನಾಡಿ, ಕನ್ನಡ ಭಾಷೆ ಅತ್ಯಂತ ಶ್ರೇಷ್ಠ, ಸುಮಧುರ ಹಾಗೂ ಶ್ರೀಮಂತವಾಗಿದೆ ಎಂದರು. ಕಸಾಪ ಅಧ್ಯಕ್ಷ ಪ್ರಶಾಂತ ಮಠಪತಿ ಮತ್ತಿತರರು ಇದ್ದರು.